Coorgcitizen

ಮಡಿಕೇರಿ ಜೂ.23 : ಕೋವಿಡ್-19 ರ ಸಂಬಂಧ ಜೂನ್, 23 ರಂದು ಜಿಲ್ಲೆಯಲ್ಲಿ ಮತ್ತೆ 02 ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಈ ಎರಡೂ ಪ್ರಕರಣಗಳು ಜೂನ್, 22 ರಂದು ಕೋವಿಡ್-19 ಸೋಂಕು ದೃಢಪಟ್ಟಿದ್ದ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿ, ಶಿರಂಗಾಲ ಗ್ರಾಮದ ವ್ಯಾಪಾರಿಯ (ರೋಗಿ ಸಂಖ್ಯೆ 9215) ಮಕ್ಕಳಾಗಿದ್ದು, ಅವರ ವಯಸ್ಸು 17 ಮತ್ತು 14 ವರ್ಷವಾಗಿರುತ್ತದೆ ಎಂದು ಜಿಲ್ಲಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ಕೋವಿಡ್-19 ಧೃಢಪಟ್ಟಿರುವ ಮಕ್ಕಳು ಸಹ ಜೂನ್, 22 ರಂದು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು ಕೋವಿಡ್ ಸೋಂಕಿತ ಪ್ರಕರಣಗಳು 08 ಆಗಿದ್ದು, 03 ಪ್ರಕರಣಗಳು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 05 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

Open chat