Coorgcitizen

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಈ ದಿನ ಮತ್ತೊಂದು ಸಾವು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 28 ಕ್ಕೇರಿದೆ.

ಮಡಿಕೇರಿ ತಾಲ್ಲೂಕು ಎಮ್ಮೆಮಾಡು ಗ್ರಾಮದ ನಿವಾಸಿ 50 ವರ್ಷದ ಪುರುಷರೊಬ್ಬರು ಈ ಹಿಂದಿನಿಂದಲೂ ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಪಾರ್ಶ್ವವಾಯು ಕಾಯಿಲೆಗೆ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸೆ.೮ ರಂದು ಕಫ ಸಮಸ್ಯೆಯಿಂದ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ (ಅಶ್ವಿನಿ ಆಸ್ಪತ್ರೆಗೆ) ಬಂದಿದ್ದು, ಆಗ ಅವರಿಗೆ ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ತಕ್ಷಣ ಅವರನ್ನು ಕೋವಿಡ್ ಆಸ್ಪತ್ರೆಯ ಐ.ಸಿ.ಯು ಗೆ ದಾಖಲಿಸಿಕೊಂಡು ಚಿಕಿತ್ಸೆ ಮುಂದುವರೆಸಿದ್ದು, ಸೆ.೧೫ ರಂದು ಬೆಳಿಗ್ಗೆ 8.00 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.

ಮೃತ ದೇಹದ ಅಂತ್ಯ ಸಂಸ್ಕಾರವನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Open chat