Coorgcitizen

ಕುಶಾಲನಗರ ಹೋಬಳಿಯ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೈಗೊಂಡಿರುವ ಒಟ್ಟು ೫ ಕೋಟಿ ರೂ ಮೊತ್ತದ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಭೂಮಿಪೂಜೆ ನೇರವೇರಿಸಿದರು.
ಶಾಸಕರ ಅನುದಾನ ಮತ್ತು ಸರಕಾರದ ವಿವಿಧ ಪಾಕೇಜ್ ಯೋಜನೆಯ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಂಜನ್, ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಕ್ರೀಟ್ ರಸ್ತೆ ಮತ್ತು ಪರಿಶಿಷ್ಟ ಜಾತಿ/ಪಂಗಡಗಳ ಕಾಲೋನಿಗಳ ನೂತನ ರಸ್ತೆ ನಿರ್ಮಾಣ ಮತ್ತು ಡಾಂಬರೀಕರಣಕ್ಕೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಂಡು ಉತ್ತಮವಾದ ರಸ್ತೆಯನ್ನು ನಿರ್ಮಾಣ ಮಾಡಿಸಿಕೊಳ್ಳಬೇಕು ಎಂದರು. ಇದರೊಂದಿಗೆ ಕೇಂದ್ರ ಸರಕಾರದ ಮಹತ್ವಾಂಕಾಕ್ಷೆ ಯೋಜನೆಗಳಾದ ನಿರಂತರ ವಿದ್ಯುತ್, ಕುಡಿವ ನೀರು ಸರಬರಾಜು ಯೋಜನೆಯನ್ನು ತಾಲೂಕಿನ ಹೆಬ್ಬಾಲೆ, ಕೂಡಿಗೆ ಸೇರಿದಂತೆ ಸುತ್ತಮುತ್ತಲ ಕೆಲವು ಗ್ರಾಮಗಳಲ್ಲಿ ಪ್ರಥಮ ಹಂತದಲ್ಲಿ ಅನುಷ್ಠಾನ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ತಾಲೂಕಿನ ಗಣಗೂರು, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ, ಗುಡ್ಡೆಹೊಸೂರು ಸೇರಿದಂತೆ ಹಲವು ಗ್ರಾಮ ಪಂಚಾಯತಿಗಳಲ್ಲಿ ಶಾಸಕರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶ್ರೀನಿವಾಸ್, ಕೆ.ಅರ್.ಮಂಜುಳ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಗಣೇಶ್, ಸಬಿತ ಚನ್ನಕೇಶವ, ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ಸದಸ್ಯ ಸುರೇಶ್, ಜನಪ್ರತಿನಿಧಿಗಳಾದ ಕೆ.ಕೆ.ಭೋಗಪ್ಪ, ಭಾಸ್ಕರ್ ನಾಯಕ್, ಬಿಜೆಪಿ ಪ್ರಮುಖರಾದ ಮನುಕುಮಾರ್ ರೈ, ಗಣಿಪ್ರಸಾದ್, ವಿವಿಧ ಘಟಕಗಳ ಅಧ್ಯಕ್ಷರು ನೂತನ ಗ್ರಾಮ ಪಂಚಾಯತಿ ಸದಸ್ಯರುಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

Open chat