Coorgcitizen

ಹೋಬಳಿ ವಿಶ್ವಕರ್ಮ ಸಮಾಜದ ವತಿಯಿಂದ ಅಮರಶಿಲ್ಪಿ ಜಕಣಾಚಾರಿಯ ಸಂಸ್ಮರಣ ದಿನವನ್ನು ಆಚರಿಸಲಾಯಿತು.
ಕುಶಾಲನಗರದ ವಿಶ್ವಕರ್ಮ ಸಮಾಜದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಮಾಜಿ ಕಾರ್ಯದರ್ಶಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಎಚ್.ಎನ್. ನಾಗಚಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೇವಾಲಯಗಳು ಹಾಗೂ ವಿಗ್ರಹಗಳ ನಿರ್ಮಾಣದಲ್ಲಿ ಶ್ರೇಷ್ಠ ಶಿಲ್ಪಿಯ ಎನಿಸಿದ ಅಮರಶಿಲ್ಪಿ ಜಕಣಾಚಾರಿ ಕುರಿತು ಮಾಹಿತಿ ನೀಡಿದರು.
ಸಮಾಜದ ಅಧ್ಯಕ್ಷರಾದ ಹೆಚ್.ಬಿ ಲಿಂಗಮೂರ್ತಿ ಮಾತನಾಡಿ, ಜಕಣಾಚಾರಿಯವರು ಶಿಲ್ಪಿಗಳ ಲೋಕದಲ್ಲಿ ಅಜರಾಮರರಾಗಿ ಅಮರಶಿಲ್ಪಿ ಜಕಣಾಚಾರಿ ಎಂದು ವಿಶ್ವಮಾನ್ಯರಾಗಿದ್ದಾರೆ. ಹಾಗಾಗಿ ಕರ್ನಾಟಕ ಸರಕಾರ ಜನವರಿ ಒಂದರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಎಂದು ಘೋಷಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ನಿರ್ದೇಶಕರು ಕುಲಬಾಂಧವರು ಭಾಗವಹಿಸಿದ್ದರು. ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.

Open chat