Coorgcitizen

ಕುಶಾಲನಗರ–: ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿಕೆಗೆ ಒತ್ತು ನೀಡಿದಾಗ ಮಾತ್ರ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯ ಎಂದು ಕುಶಾಲನಗರ ಸಿ ಆರ್ ಪಿ ಸಂತೋಷ್ ಕುಮಾರ್ ಇಂದಿಲ್ಲಿ ತಿಳಿಸಿದರು. ಕುಶಾಲನಗರದ ಫಾತಿಮಾ ಪ್ರೌಢಶಾಲೆಯಲ್ಲಿ ಇಂದು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎನ್ ಎಂ ಎಂ ಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಕೊರೊನಾ ಮಹಾಮಾರಿಯ ಹಾವಳಿಯಿಂದ ದೀರ್ಘಕಾಲದ ಲಾಕ್ ಡೌನ್ ನಿಂದಾಗಿ ಮಕ್ಕಳು ಆನ್ಲೈನ್ ತರಗತಿಗಳ ಮೂಲಕ ಸಾಕಷ್ಟು ಪಠ್ಯ ಪ್ರವಚನಗಳನ್ನು ಅಭ್ಯಾಸ ಮಾಡಿದ್ದಾರೆ. ತಾವು ಈ ಅವಧಿಯಲ್ಲಿ ಕಲಿತಂತಹ ಪಠ್ಯ ಪುಸ್ತಕಗಳ ವಿಚಾರವಾಗಿ ಇಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದ್ದು ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆಗೆ ಸಜ್ಜಾಗಿ ಬಂದಿರುವುದು ಸ್ವಾಗತಾರ್ಹ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯಲೆಂದು ಆಶಿಸುವುದಾಗಿ ಇದೇ ಸಂದರ್ಭ ತಿಳಿಸಿದರು. ನಂತರ ಮಾತನಾಡಿದ ಶಾಲಾ ಮುಖ್ಯಶಿಕ್ಷಕ ಜಫ್ರಿ ಡಿಸಿಲ್ವಾ ಇಂದು ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಎನ್ ಎಂ ಎಂ ಎಸ್ ಸ್ಪರ್ಧಾತ್ಮಕ ಪರೀಕ್ಷೆಯ ನೆರವೇರುತ್ತಿದೆ. ಮೊದಲೆಲ್ಲಾ ಶಾಲೆಯಲ್ಲಿ ಶಿಕ್ಷಕರು ಇಂತಹ ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡುತ್ತಿದ್ದರು. ಇಂತಹ ಸ್ಪರ್ಧಾತ್ಮಕ ಪೂರ್ವಭಾವಿ ಪರೀಕ್ಷೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುವುದಲ್ಲದೆ ತಾವು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಬೇಕು ಎಂಬ ಛಲವು ಮೂಡುತ್ತದೆ ಎಂದು ಇದೇ ಸಂದರ್ಭ ತಿಳಿಸಿದರು. ಈ ಸಂದರ್ಭ ಶಿಕ್ಷಕರಾದ ಪ್ರವೀಣ್. ಕಮಲ್ ನಾಥನ್. ಸರ್ದಾರ್ ಪಾಷಾ. ಫ್ರಾನ್ಸಿಸ್. ಜೋಯ್ಸಿ. ಸೇರಿದಂತೆ ನೂರಾರು ಮಂದಿ ವಿದ್ಯಾರ್ಥಿಗಳು ಹಾಜರಿದ್ದರು.

Open chat