Coorgcitizen

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಗ್ರಾಪಂ ನೂತನ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕೂಡಿಗೆಯ ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮಪಂಚಾಯ್ತಿಗೆ ಸದಸ್ಯರಾಗಿ ಆಯ್ಕೆಯಾದ ಜನಪ್ರತಿನಿಧಿಗಳು ಗ್ರಾಮಾದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಿದೆ. ಸೋತವರು, ಗೆದ್ದವರು ಒಗ್ಗೂಡಿ ಪಕ್ಷ ಸಂಘಟನೆಯೊಂದಿಗೆ ಗ್ರಾಮಸ್ಥರ ಸೇವೆ ಮುಂದಾಗಬೇಕಿದೆ. ಈ ಮೂಲಕ ಮುಂದಿನ ತಮ್ಮ ರಾಜಕೀಯ ಭವಿಷ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಸಚಿವ ಬಿ.ಎ.ಜೀವಿಜಯ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಜ್ಯ ಮತ್ತು ರಾಷಷ್ಟ್ರದಲ್ಲಿ ಅಧಿಕಾರಕ್ಕೆ ತರುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಜನವೀರೋಧಿ ನೀತಿ, ಸಂವಿಧಾನಕ್ಕೆ ಅಪಮಾನ ಎಸಗುವ ರೀತಿಯಲ್ಲಿ ಬಿಜೆಪಿ ಸರಕಾರ ಆಡಳಿತ ನಡೆಸುತ್ತಿದೆ. ಪೊಳ್ಳು ಭರವಸೆಗಳ ಮೂಲಕ ಜನರನ್ನು ಮರಳು ಮಾಡಿದ್ದಾರೆ. ಇದು ಬದಲಾಗಬೇಕು. ದೇಶದಲ್ಲಿ ಸಮಾನತೆ ಸಾರಲು ಕಾಂಗ್ರೆಸ್ ಆಡಳಿತಕ್ಕೆ ಬರುವುದು ಅನಿವಾರ್ಯ ಎಂದರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್‌ಕುಮಾರ್ ಮಾತನಾಡಿ, ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಸಂಘಟನೆಯತ್ತ ಎಲ್ಲರೂ ಚಿಂತನೆ ಹರಿಸಬೇಕಿದೆ. ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಸೈದ್ದಾಂತಿಕ, ರಾಜಕೀಯ ವಿರೋಧಿ ಬಿಜೆಪಿಯೊಂದಿಗೆ ಹೋರಾಡಲು ಸನ್ನದರಾಗಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಕುಶಾಲನಗರ ಬ್ಲಾಕ್‌ನಲ್ಲಿ ಉತ್ತಮ ಸಾಧನೆಯಾಗಿದೆ. ಮುಂಬರುವ ಜಿಪಂ, ತಾಪಂ ಚುನಾವಣೆಗಳಲ್ಲಿ ಕೂಡ ಹೆಚ್ಚಿನ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿಗಳು ಚುನಾಯಿತರಾಗಲು ಶ್ರಮಿಸಬೇಕಿದೆ. ಜಿಲ್ಲೆಗೆ ಕಾಂಗ್ರೆಸ್‌ನ ಎರಡು ಶಾಸಕರನ್ನು ಆಯ್ಕೆಗೊಳಿಸುವುದು ಮುಖ್ಯ ಗುರಿಯಾಗಬೇಕಿದೆ ಎಂದರು.
ಜಿಪಂ ಸದಸ್ಯೆ ಕೆ.ಪಿ.ಚಂದ್ರಕಲಾ, ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಪ್ರಮುಖರಾದ ಎಸ್.ಎನ್.ರಾಜಾರಾವ್ ಮಾತನಾಡಿದರು.
ವೇದಿಕೆಯಲ್ಲಿ ಕೆಪಿಸಿಸಿ ಉಸ್ತುವಾರಿ ಪ್ರದೀಪ್‌ಕುಮಾರ್ ರೈ ಪಾಂಬಾರು, ವಿಕಲಚೇತನರ ಸಂಘದ ರಾಜ್ಯಾಧ್ಯಕ್ಷ ಸುರೇಶ್, ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಹಸೈನಾರ್, ಜಿಪಂ ಮಾಜಿ ಉಪಧ್ಯಕ್ಷೆ ರಾಜಮ್ಮ ರುದ್ರಯ್ಯ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಎಂ.ಲೋಕೇಶ್ ಇದ್ದರು.
ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಶರೀಫ್ ಇಬ್ರಾಹಿಂ, ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ, ಜಿಲ್ಲಾ ಪ್ರಮುಖರಾದ ಗೋವಿಂದರಾಜ್‌ದಾಸ್, ಜನಾರ್ಧನ್, ಹೂವಯ್ಯ, ಸುರೇಶ್, ದೇವ್ ಮತ್ತಿತರರು ಇದ್ದರು.
ಬ್ಲಾಕ್ ವ್ಯಾಪ್ತಿಯ ೪೦ ಕ್ಕೂ ಅಧಿಕ ಮಂದಿ ನೂತನ ಜನಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಚುನಾವಣೆಯಲ್ಲಿ ಶ್ರಮಿಸಿದ ಬೂತ್, ವಲಯ ಅಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

Open chat