Coorgcitizen

ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್-೧೯ ಲಸಿಕೆ ವಿತರಣೆಯ ಪೂರ್ವಭಾವಿ ತಯಾರಿ ನಡೆಸಲಾಯಿತು. ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮೋಹನ್ ಡ್ರೈ ರನ್ ಸಿದ್ದತೆಗಳನ್ನು ಪರಿಶೀಲಿಸಿ ಸಿಬ್ಬಂದಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಮೋಹನ್, ವಿವಿಧ ಹಂತದಲ್ಲಿ ನಡೆಯುವ ಲಸಿಕೆ ವಿತರಣೆಗೆ ಕೈಗೊಂಡ ಅಗತ್ಯ ಸಿದ್ದತೆಗಳ ಬಗ್ಗೆ ಮಾಹಿತಿ ನೀಡಿದರು. ಪ್ರಥಮ ಹಂತದಲ್ಲಿ ಆರೋಗ್ಯ ಸಹಾಯಕರು, ಆಶಾ, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಖಾಸಗಿ ಆರೋಗ್ಯ ಕ್ಷೇತ್ರದವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಎಸ್.ಗೋಪಿನಾಥ್, ಸಾಂಕ್ರಾಮಿಕ ರೋಗ ನಿಯಂತ್ರಣ ಅಧಿಕಾರಿ ಡಾ.ಮಹೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಸಮುದಾಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಮಧುಸೂದನ್ ಸೇರಿದಂತೆ ತಂತ್ರಜ್ಞರು, ಸಿಬ್ಬಂದಿ ವರ್ಗದವರು ಇದ್ದರು.

Open chat